Yakshagana: ಯಕ್ಷಕಿರೀಟ ಸುಬ್ರಾಯ ಹೊಳ್ಳರಿಗೆ ದುಬಾಯಿ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ 2025

Yakshagana: ಯಕ್ಷಗಾನ (Yakshagana) ಅಭ್ಯಾಸ ಕೇಂದ್ರ ಯು ಎ ಇ (YAKU) 2024-2025 ನೇ ಸಾಲಿನ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ಯಕ್ಷಗಾನದ ಪ್ರಾತಿನಿಧಿಕ ಕಲಾವಿದ, ಕಾಸರಗೋಡು ಸುಬ್ರಾಯ ಹೊಳ್ಳರಿಗೆ ನೀಡಲಾಗುವುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಜೂ.29 ರಂದು ಯಕ್ಷಧ್ರುವ ಪಟ್ಲ ಪೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿರುವ ದುಬಾಯಿ ಯಕ್ಷೋತ್ಸವ 2025 ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ, ನಿರಂತರ 42 ವರ್ಷಗಳ ಕಾಲ ಯಕ್ಷಗಾನದ ಸೇವೆಯನ್ನು ಮಾಡುತ್ತ ಬಂದಿರುವ ಕೆ.ಎನ್.ಸುಬ್ರಾಯ ಹೊಳ್ಳ ಕಾಸರಗೋಡುರವರಿಗೆ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇವರ ವಾರ್ಷಿಕ ಪ್ರಶಸ್ತಿ “ಯಕ್ಷ ಶ್ರೀ ರಕ್ಷ ಗೌರವ ಪ್ರಶಸ್ತಿ-2025″ಯನ್ನು ನೀಡಿ ಗೌರವಿಸಲಾಗುವುದು.
Comments are closed.