Agumbe: ಆಗುಂಬೆ ಘಾಟಿಯಲ್ಲಿ ಘನ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗದಲ್ಲಿ ಚಲಿಸುವಂತೆ ಸೂಚನೆ!

Agumbe: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ (Agumbe) ಘಾಟಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂನ್ 15 ರಿಂದ 30ರವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದ್ದಾರೆ.
ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವಂತಹ ಭಾರಿ ವಾಹನಗಳು ಉಡುಪಿ-ಕುಂದಾಪುರ ಸಿದ್ಧಾಪುರ ಮಾಸ್ತಿಕಟ್ಟೆ-ತೀರ್ಥಹಳ್ಳಿಗೆ ತೆರಳುವಂತೆ ಸೂಚಿಸಲಾಗಿದೆ.
ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟಿ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.
Comments are closed.