Bagalakote: ಮಲಗಿದ್ದ ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು

Bagalakote: ಮಲಗಿದ್ದ ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಬಾಗಲಕೋಟೆಯ ಕುಳಗೇರಿ ಕ್ರಾಸ್ನಲ್ಲಿ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಈ ರೀತಿಯ ಅಮಾನವೀಯ ಘಟನೆ ನಡೆದಿದೆ.

ಗ್ರಾಮದ ಭರಮಪ್ಪ ಕುರಿ ಎಂಬುವವರು ಸಾಕಿದ ಹಸುವಿನ ಕೆಚ್ಚಲು ಕೊಯ್ದ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಹಸುವಿನ ಕೆಚ್ಚಲಿನಿಂದ ರಕ್ತಸ್ರಾವ ಆಗುತ್ತಿರುವುದನ್ನು ಕಂಡ ಮನೆಯವರು ಹಸುವನ್ನು ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕುಳಗೇರಿ ಉಪಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
Comments are closed.