Maharashtra: ಕೊಚ್ಚಿ ಹೋದ ಸೇತುವೆ: 6 ಮಂದಿ ಸಾವು – 20ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿರುವ ಸಾಧ್ಯತೆ

Maharashtra: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮಾವಲ್ ತಾಲೂಕಿನ ಕುಂಡ್ ಮಾಲಾ ಎಂಬಲ್ಲಿ ಸೇತುವೆ ದಿಡೀರೆಂದು ಕುಸಿದಿದ್ದು 6 ಜನರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಹಾಗೂ 20ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ.

ಇಂದ್ರಾಣಿ ನದಿಗೆ ಈ ಸೇತುವೆಯನ್ನು ಕಟ್ಟಲಾಗಿತ್ತು, ವಾರಾಂತ್ಯ ವಾಗಿರುವುದರಿಂದ ಹೆಚ್ಚಿನ ಪ್ರವಾಸಿಗರು ನೆರೆದಿದ್ದಂತಹ ಸಂದರ್ಭದಲ್ಲಿ ದಿಢೀರ್ ಎಂದು ಸೇತುವೆ ಕುಸಿದಿರುವಂತಹದ್ದು, ಸದ್ಯ 20ಕ್ಕೂ ಹೆಚ್ಚು ಒಂದೇ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು ಹಾಗೂ ಅಗ್ನಿಶಾಮಕ ರಕ್ಷಣಾ ಪಡೆಯವರು ಕಾರ್ಯಾಚರಣೆ ನಡೆಸುತ್ತಿದ್ದು ನಿರಂತರವಾಗಿ ಸುರಿಯುತ್ತಿರುವ ಮಳೆ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ವರದಿಯಾಗಿದೆ.
Comments are closed.