Udupi: ಇನ್ನು ಮದುವೆಯಾಗಿಲ್ಲ ಎಂಬ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ

Share the Article

Udupi: ಇನ್ನು ಮದುವೆಯಾಗಿಲ್ಲ ಎಂಬ ಕಾರಣಕ್ಕಾಗಿ ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ಉದ್ಯಾವರದಲ್ಲಿ ನಡೆದಿದೆ.

ಮೀನುಗಾರಿಕೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಂತಹ ಈತ, ಎರಡು ದಿನಗಳಿಂದ ತೀವ್ರ ಮಳೆಯಿಂದಾಗಿ ಮೀನುಗಾರಿಕೆ ಕೆಲಸಕ್ಕೆ ರಜೆ ಇದ್ದ ಕಾರಣ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮದುವೆಯಾಗದೆ ಇರುವುದಕ್ಕೆ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಅವರ ತಾಯಿ ಸುಶೀಲ ಹೇಳಿಕೆ ನೀಡಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.