Belthangady: ನದಿ ದಾಟುವಾಗ ಕೊಚ್ಚಿ ಹೋದ ಬೈಕ್ – ಪವಾಡವೆಂಬಂತೆ ಪಾರಾದ ಇಬ್ಬರು ಯುವಕರು !!

Belthangady : ಯುವಕರಿಬ್ಬರು ಕೆಲಸದ ನಿಮಿತ್ತ ಬೈಕ್ ಸಮೇತ ನದಿಯನ್ನು ದಾಟುವ ವೇಳೆ ಬೈಕ್ ಕಚ್ಚಿಕೊಂಡು ಹೋಗಿದ್ದು ಇಬ್ಬರು ಯುವಕರು ಪವಾಡ ಸದೃಶದಿಂದ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಹೌದು, ತಾಲೂಕಿನ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬ ಇಬ್ಬರು ಯುವಕರು ಕೆಲಸಕ್ಕೆ ಹೋಗುವಾಗ ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ನದಿಯನ್ನು ಬೈಕ್ ಸಮೇತ ದಾಟುತ್ತಿದ್ದರು. ಈ ವೇಳೆ ನದಿ ನೀರಿನಲ್ಲಿ ಬೈಕ್ ಕೊಚ್ಚಿ ಹೋಗಿದೆ.
ಇನ್ನು ಕೂಡಲೇ ಯುವಕರಿಬ್ಬರು ಕೈಗೆ ಸಿಕ್ಕ ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಪಾರಾಗಿ ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.
Comments are closed.