Bengaluru: ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ

Bengaluru: ಬೆಂಗಳೂರಿನ ಕುಂಬಳಗೂಡು ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.
ಸೋಮವಾರ ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಫೋಟ ಮಾಡಿ ಕಟ್ಟಡ ಧ್ವಂಸ ಮಾಡುವುದಾಗಿ ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್ ಶಾಲೆಗೆ ಭಾನುವಾರ ರಾತ್ರಿ ಬೆದರಿಕೆ ಸಂದೇಶ ಬಂದಿತ್ತು. ಅದರಂತೆ, ಶಾಲೆಯ ಆಡಳಿತ ಮಂಡಳಿಯವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಾಗೂ ಶ್ವಾನ ದಳ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.
Comments are closed.