Mangaluru: ಮಂಗಳೂರು ವಿವಿಯ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್‌ನಲ್ಲಿ ಬೆಂಕಿ ಅವಘಡ!

Share the Article

Mangaluru: ಭಾನುವಾರ ರಾತ್ರಿ ಮಂಗಳೂರು (Mangaluru) ದೇರಳಕಟ್ಟೆಯಲ್ಲಿ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್‌ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟ‌ರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲಿಯುವ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು ನಡೆಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಜನರೇಟರ್ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದೆ ಎನ್ನಲಾಗಿದೆ.

Comments are closed.