Chikkaballapur: ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

Share the Article

Chikkaballapur: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.

Comments are closed.