Chikkamagaluru: ಭಾರೀ ಗಾಳಿ ಮಳೆಗೆ ಧರೆಗುರುಳಿದ ಮರ: ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್‌

Share the Article

Chikkamagaluru: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಹೊಡೆತಕ್ಕೆ ಬೃಹತ್‌ ಮರವೊಂದು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲ್ಲೂಕಿನ ಕೈಮರ ಚೆಕ್‌ಪೋಸ್ಟ್‌ ಸಮೀಪ ಬೃಹತ್‌ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್‌ ಆಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ. ಮರ ತೆರವುಗೊಳಿಸವ ಕೆಲಸ ನಡೆಯುತ್ತಿದೆ.

ಇದೇ ರೀತಿ ಕೊಪ್ಪ ತಾಲೂಕಿನ ಮೇಗೂರು ಬಳಿ ಬೃಹತ್‌ ಮರವೊಂದು ಬುಡ ಸಮೇತ ಉರುಳಿ ಬಿದ್ದಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮೇಗೂರಿನಿಂದ ಕೊಗ್ರೆ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಬೃಹತ್‌ ಮರ ಬಿದ್ದಿದ್ದು, ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿದ್ದಾರೆ. ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.

Comments are closed.