Madikeri: ವಿಕಲಚೇತನರ ಆರೈಕೆ; ಅರ್ಜಿ ಆಹ್ವಾನ!

Share the Article

Madikeri: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೆರಬ್ರಲ್ ಪಾಲ್ಸಿ, ಸ್ನಾಯುಕ್ಷಯ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಅಟಿಸಮ್, ಬೌದ್ಧಿಕ ಮತ್ತು ಬಹು ಅಂಗವೈಕಲ್ಯ (ಶ್ರವಣ ಮತ್ತು ದೃಷ್ಟಿ ನ್ಯೂನತೆ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರರಿಗೆ ಮಾಹೆಯಾನ ರೂ.1 ಸಾವಿರ ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದ ಫಲಾನುಭವಿ ಹೊರತುಪಡಿಸಿ 2025-26ನೇ ಸಾಲಿಗೆ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ.

ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ ಈ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ- 8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ-9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ–8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

Comments are closed.