ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ವರ್ಗ, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿಕೆ

Share the Article

ಉಡುಪಿ: ಜಿಲ್ಲೆಯ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ವರ್ಗ ಮಾಡಿ ರಾಜ್ಯ ಸರಕಾರ ಇದೀಗ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಮೇಡಂ ಸ್ವರೂಪ ಟಿ.ಕೆ ರವರು ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್‌ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ಸೂಚಿಸಿಲ್ಲ ಎಂದು ತಿಳಿದು ಬಂದಿದೆ.

Comments are closed.