Bantwala: ಪಾಣೆಮಂಗಳೂರಿನಲಿ ಕಾರು ಮತ್ತು ಲಾರಿ ಅಪಘಾತ: ಮೂವರಿಗೆ ಗಾಯ!

Share the Article

Bantwala: ಪಾಣೆಮಂಗಳೂರಿನಲ್ಲಿ ಗೂಡ್ಸ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನ ಚಾಲಕ ಸಹಿತ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

 

ಪುತ್ತೂರು ನಿವಾಸಿ ಹರಿಪ್ರಸಾದ್ ಅವರು ಇತರರೊಂದಿಗೆ ಕಾರಿನಲ್ಲಿ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದರು.

ಎದುರಿನಿಂದ ವೇಗವಾಗಿ ಬಂದ ಗೂಡ್ಸ್ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

 

ಲಾರಿ ಚಾಲಕ ಅಂದಯ್ಯ ಹಿರೇಮಠ ಅವರ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹರಿಪ್ರಸಾದ್‌ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.