Accident: ಡಿವೈಡರ್ಗೆ ಕಾರು ಡಿಕ್ಕಿ: ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನ

Accident: ಇಂದು ಮುಂಜಾನೆ 5.50 ರ ಸುಮಾರಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಉತ್ತರಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ನಡೆದಿದೆ.

ಬದೌನ್ನಲ್ಲಿ ನಡೆದ ಮದುವೆ ಮುಗಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಹಿನ್ನೆಲೆ ಸ್ವಿಫ್ಟ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರು ಲಾಕ್ ಆದ ಕಾರಣ ಹೊರಬರಲಾರದೆ ಐವರು ಸಜೀವ ದಹನಗೊಂಡಿದ್ದಾರೆ.
ಈ ಘಟನೆಯಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Comments are closed.