Puttur: ಪುತ್ತೂರು: ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ವಿಶಿಷ್ಟ ಶ್ರೇಣಿ!

Share the Article

Puttur: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು 2024- 25 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಇತ್ತೀಚೆಗೆ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ನಡೆಸಿದ್ದು, ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಮೂಲಕ ಪ್ರಥಮ ಸೆಮಿಸ್ಟ‌ರ್ ಡಿಪ್ಲೋಮಾ ಪರೀಕ್ಷೆಗೆ ಹಾಜರಾದ ದಿವಾಕರ ಆಚಾರ್ಯ ಗೇರುಕಟ್ಟೆ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ(ಎ+) ಉತ್ತೀರ್ಣರಾಗಿರುತ್ತಾರೆ.

ದಿವಾಕರ ಆಚಾರ್ಯ ಇವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿದ್ದು ಹವ್ಯಾಸಿ ಕಲಾವಿದರಾಗಿ ಸಂಘಟಕರಾಗಿ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ದಿವಾಕರ ಆಚಾರ್ಯ ಇವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿದ್ದು ಹವ್ಯಾಸಿ ಕಲಾವಿದರಾಗಿ ಸಂಘಟಕರಾಗಿ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಅವರು ಯಕ್ಷಭಾರತಿ ರಿ. ಬೆಳ್ತಂಗಡಿ ಕಾರ್ಯದರ್ಶಿಯಾಗಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷರಾಗಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕದ ಉಪಾಧ್ಯಕ್ಷರಾಗಿ, ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

Comments are closed.