Bengaluru: ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್

Bengaluru: ಕಳೆದು ಒಂದು ವಾರದಿಂದ ದೇಶದ ಹಲವು ಶಾಲಾ-ಕಾಲೇಜುಗಳಿಗೆ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆ ಬರುತ್ತಿದ್ದು, ಇದೀಗ ಬೆಂಗಳೂರಿನ ಪುಲಿಕೇಶಿ ನಗರದ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಈ ಬೆದರಿಕೆ ಬಂದಿದ್ದು, ಪ್ರಾಂಶುಪಾಲರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ರಜೆ ನೀಡಿದ್ದು, ಪುಲಿಕೇಶಿ ನಗರದ ಪೊಲೀಸರು ಬಾಂಬ್ ನಿಷ್ಕ್ರಿಯಾ ದಳದ ಸಿಬ್ಬಂದಿಗಳು ಹಾಗೂ ಶ್ವಾನ ದಳದ ಸಿಬ್ಬಂದಿಗಳು ಶಾಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಪುಲಿಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.