Bantwala: ಬಂಟ್ವಾಳ: ಪತಿ ಹಾಗೂ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ!

Bantwala: ಬಂಟ್ವಾಳ (Bantwala) ನಾವೂರು ಗ್ರಾಮದ ಬಡಗುಂಡಿಎಂಬಲ್ಲಿ ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ಜೂ.19ರ ಗುರುವಾರ ನಡೆದಿದೆ.
ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು. ತಿಮ್ಮಪ್ಪ ಮೂಲ್ಯ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜಯಂತಿ ಜೊತೆ ಜಗಳ ಮಾಡಿದ್ದಾನೆ. ಅದು ವಿಕೋಪಕ್ಕೆ ತಿರುಗಿದ್ದು, ಆರೋಪಿ ತಿಮ್ಮಪ್ಪ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಕೂಡಾ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ. ಇವರಿಗೆ ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ. ಪ್ರಸ್ತುತ ಪತ್ನಿ ಗರ್ಭಿಣಿಯಾಗಿದ್ದು, ಸೀಮಂತದ ದಿನಾಂಕವೂ ನಿಗದಿಯಾಗಿತ್ತು ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
Comments are closed.