Karnataka Gvt : ನೌಕರರ ಕೆಲಸದ ಸಮಯ 9 ರಿಂದ 10 ಗಂಟೆಗೆ ಏರಿಕೆ – ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

Share the Article

Karnataka Gvt: ಕರ್ನಾಟಕ ಸರ್ಕಾರವು ಮಹತ್ವದ ಬದಲಾವಣೆಯೊಂದಕ್ಕೆ ಮುಂದಾಗಿದ್ದು, ಕೆಲಸದ ಸಮಯದ ಗರಿಷ್ಠ ಮಿತಿಯನ್ನು ಪ್ರಸ್ತುತ 9 ಗಂಟೆಗಳಿಂದ 10 ಗಂಟೆಗೆ ಹೆಚ್ಚಿಸಲು ಮತ್ತು ಹೆಚ್ಚಿನ ಓವರ್‌ಟೈಮ್ ಸಮಯವನ್ನು ಅನುಮತಿಸಲು ಪ್ರಸ್ತಾಪಿಸಿದೆ ಎಂದು ವರದಿಯಾಗಿದೆ.

ಹೌದು, ರಾಜ್ಯ ಸರ್ಕಾರವು ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1961 ಕ್ಕೆ ತಿದ್ದುಪಡಿ ತರುವ ಮೂಲಕ ಈ ಬದಲಾವಣೆಗಳನ್ನು ತರಲು ರಾಜ್ಯ ಪ್ರಯತ್ನಿಸುತ್ತಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Israel-Iran War: ಇರಾನ್‌ನ ಪರಮಾಣು ತಾಣ ನಾಶ ಮಾಡೋದು ಸುಲಭವಲ್ಲ? ನಾಶಪಡಿಸುವ ತಾಕತ್ತು ಆ ಒಂದು ದೇಶಕ್ಕೆ ಮಾತ್ರ!

ಅಂದಹಾಗೆ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ 7ರ ಪ್ರಕಾರ, ಕೆಲಸದ ಅವಧಿ ದಿನಕ್ಕೆ ಒಂಬತ್ತು ಗಂಟೆಯನ್ನು ಮೀರಬಾರದು ಮತ್ತು ಗರಿಷ್ಠ ಹೆಚ್ಚುವರಿ ಅವಧಿ (ಒಟಿ) 10 ಗಂಟೆಗಳನ್ನು ಮೀರಬಾರದು. ಇದನ್ನು ಗಮನದಲ್ಲಿಟ್ಟುಕೊಂಡು ಉದ್ದೇಶಿತ ತಿದ್ದುಪಡಿಯ ಮೂಲಕ, ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 10 ಗಂಟೆ ಮತ್ತು ಹೆಚ್ಚುವರಿ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 12 ಗಂಟೆಗಳಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಆ ಮೂಲಕ, ಮೂರು ತಿಂಗಳಲ್ಲಿ ಹೆಚ್ಚುವರಿ ಕೆಲಸದ ಗರಿಷ್ಠ ಮಿತಿಯು 50ರಿಂದ 144 ಗಂಟೆಗೆ ಹೆಚ್ಚಳ ಆಗಲಿದೆ.

ಸಮಾಲೋಚನೆಗಾಗಿ ಈ ಬದಲಾವಣೆಗಳನ್ನು ಹೊರಡಿಸಿರುವ ಕಾರ್ಮಿಕ ಇಲಾಖೆ, ಪ್ರಸ್ತಾವನೆಗಳನ್ನು ಸಮರ್ಥಿಸಿಕೊಂಡಿದೆ. ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಛತ್ತೀಸ್‌ಗಢಗಳು ಈಗಾಗಲೇ ಇದೇ ರೀತಿಯ ಬದಲಾವಣೆಗಳನ್ನು ಪರಿಚಯಿಸಿರುವ ಪ್ರಮುಖ ರಾಜ್ಯಗಳಲ್ಲಿ ಸೇರಿವೆ ಎಂದು ಇಲಾಖೆ ತಿಳಿಸಿದೆ.

ಬೇರೆ ಯಾವ ರಾಜ್ಯಗಳು 10 ಗಂಟೆಗಳ ಕೆಲಸದ ಅವಧಿಯನ್ನು ಹೊಂದಿವೆ? : 2019 ಮತ್ತು 2020 ರಲ್ಲಿ ಕೇಂದ್ರ ಸರ್ಕಾರವು ಕೆಲಸದ ಸಮಯವನ್ನು ಹೆಚ್ಚಿಸಲು ಅವಕಾಶ ನೀಡುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಅಂಗೀಕರಿಸಿದ ನಂತರ, ಬಿಜೆಪಿ ಆಡಳಿತವಿರುವ ಛತ್ತೀಸ್‌ಗಢ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳು ಶಾಸನಗಳನ್ನು ಅಂಗೀಕರಿಸಿವೆ. ಇತ್ತೀಚೆಗೆ, ಆಂಧ್ರಪ್ರದೇಶ ಸಚಿವ ಸಂಪುಟವು ದಿನಕ್ಕೆ ಕೆಲಸದ ಸಮಯವನ್ನು 10ಕ್ಕೆ ಹೆಚ್ಚಿಸಲು ಅನುಮೋದನೆ ನೀಡಿದೆ .

ಇದನ್ನೂ ಓದಿ:Death: ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಯುವಕ ಸಾವು

Comments are closed.