Audio Viral: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ನಿಂದಲೇ ಭ್ರಷ್ಟಾಚಾರ ಆರೋಪ – ಆಡಿಯೋ ವೈರಲ್

Share the Article

Audio Viral : ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್.‌ಪಾಟೀಲ್‌ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಈ ಕುರಿತಾದ ಆಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಇದರಿಂದ ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದಂತಾಗಿದೆ.

 

ಹೌದು, ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.‌ಪಾಟೀಲ್‌ ಅವರು ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ ಮಾತನಾಡಿದ್ದು, ಇದರಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಇದಕ್ಕೆ ಸಂಬಂಧಪಟ್ಟ ಆಡಿಯೋವೊಂದು ವೈರಲ್ ಆಗುತ್ತಿದೆ.

 

ಆಡಿಯೋದಲ್ಲಿ ವಸತಿ ಯೋಜನೆಯಡಿ ಹಣ ನೀಡಿದವರಿಗಷ್ಟೇ ಮನೆ ಮಂಜೂರು ಮಾಡಲಾಗ್ತಿದೆ. ನಮ್ಮ ಸರ್ಕಾರವನ್ನೇ ದೂರಲು ನನಗೆ ಬೇಸರವಾಗ್ತಿದೆ ಎಂದು ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸರ್ಫರಾಜ್ ಖಾನ್ ಯಾವ ಕ್ಷೇತ್ರದಲ್ಲಿ ಹೀಗೆ ಆಗಿದೆ ಮಾಹಿತಿ ನೀಡಿ. ಕೊಡಲೇ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು. ಅದಕ್ಕೆ ಬಿಆರ್ ಪಾಟೀಲ್ ಅವರು ಆಳಂದ ಮತ್ತು ಅಫಜಲಪುರ ಕ್ಷೇತ್ರ ಸೇರಿದಂತೆ ಹಲವೆಡೆ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Comments are closed.