Mangaluru: ಮಂಗಳೂರು: ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆ!

Mangaluru : ಫಲ್ನೀರ್ ನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದಾಳೆ.
ಸದ್ಯ ತಮಿಳುನಾಡಿನ ಹರಿಣಿತ ಬಿ.ಎಸ್. ಇವರ ಹೆಸರಿನಲ್ಲಿ ಇರುವ 15 ನಿಮಿಷದ ಕಪೋತಾಸನದ ದಾಖಲೆಯನ್ನು ಮುರಿದು ಈ ಸಾಧಕಿ ಒಂದು ಗಂಟೆ ಎರಡು ನಿಮಿಷದ ಅವಧಿಗೆ ಸಾಧಿಸಿ ಈ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ.
Comments are closed.