Tiger death: ಮಾನವ-ಪ್ರಾಣಿ ಸಂಘರ್ಷದಲ್ಲಿ ಗಾಯಗೊಂಡಿದ್ದ ಹುಲಿ – ಮೃಗಾಲಯದಲ್ಲಿ ಹೆಣ್ಣು ಹುಲಿ ಸಾವು

Share the Article

Tiger death: ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯದಲ್ಲಿನ ‘ದೇವಿ’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ನರಳುತ್ತಿದ್ದು ಗುರುವಾರ ಮೃತಪಟ್ಟಿದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.

ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿದ್ದ ಹೆಣ್ಣು ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು. ಮೃಗಾಲಯದಲ್ಲಿರುವ ರಕ್ಷಣಾ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ವೈದೋಪಚಾರ ನೀಡಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿತ್ತು. ಈ ಹುಲಿಗೆ ಅಂದಾಜು 18 ರಿಂದ 19 ವರ್ಷ ವಯಸ್ಸಾಗಿದ್ದು ವಯೋಸಹಜವಾಗಿ ಮೃತಪಟ್ಟಿರುತ್ತದೆ. ಈ ಹುಲಿಗೆ ವೈದ್ಯರಾದ ಡಾ. ಪ್ರಕೃತಿ ಹಾಗೂ ಬಸವರಾಜ ಅವರು ಚಿಕಿತ್ಸೆ ನೀಡಿದ್ದರು. ಕಳೆದ ಎರಡು ವರ್ಷದಿಂದ ವೈದ್ಯೋಪಚಾರ ನೀಡಲಾಗಿತ್ತು. ವಯೋಸಹಜವಾಗಿ ಹುಲಿ ಮೃತಪಟ್ಟಿದೆ.

Comments are closed.