Kapu: ಕಾಪು: ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು!

Kapu: ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ಇನ್ನಂಜೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕ ಇನ್ನಂಜೆಯ ರಾಕೇಶ್ (32) ಎಂದು ತಿಳಿದು ಬಂದಿದೆ.
ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.
Comments are closed.