Police Hat: ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ – ಸರ್ಕಾರದಿಂದ ಮಹತ್ವದ ನಿರ್ಧಾರ, ಇಲ್ಲಿದೆ ಕಾರಣ

Police Hat: ಕರ್ನಾಟಕದಲ್ಲಿ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳು ಈಗಲೂ ಬ್ರಿಟಿಷ್ ಕಾಲದ ಟೋಪಿಯನ್ನು (Hat) ಧರಿಸುತ್ತಿದ್ದು ಈ ಟೋಪಿ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಕೆಲಸ ಸಮಯಗಳ ಹಿಂದೆ ಸರ್ಕಾರವು ಕೂಡ ಇದಕ್ಕೆ ಆಸ್ತು ಎಂದಿತ್ತು. ಆದರೆ ಇದೀಗ ಪೊಲೀಸ್ ಕಾನ್ಸ್ಟೇಬಲ್ ಟೋಪ್ಪಿಯಲ್ಲಿ ಬದಲಾವಣೆ ಇಲ್ಲ ಎಂದು ಸರ್ಕಾರ ತಿಳಿಸಿದೆ.
ಹೌದು, ರಾಜ್ಯ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳು ಧರಿಸುವ ಸ್ಲೋಚ್ ಹ್ಯಾಟ್ (ಟೋಪಿ) ಬದಲಾವಣೆ ಮಾಡದಂತೆ ಸರ್ಕಾರಕ್ಕೆ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.
ಅಲ್ಲದೆ ಎಲ್ಲ ಪೊಲೀಸರಿಗೂ ಏಕರೂಪ ಟೋಪಿ ಬಳಕೆ ಜಾರಿಗೊಂಡರೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಗುರುತಿಸುವಿಕೆ ಕಷ್ಟವಾಗಲಿದೆ. ಇದು ಕೆಲ ಪೊಲೀಸರ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಬೀರಬಹುದು ಎಂದಿರುವ ಸಮಿತಿ, ಸ್ಲೋಚ್ ಹ್ಯಾಟ್‌ಗೆ ಪರ್ಯಾಯವಾಗಿ ತೆಳುವಾದ ಟೋಪಿ ಬಳಕೆಗೆ ಸಲಹೆ ನೀಡಿದೆ ಎಂದು ತಿಳಿದು ಬಂದಿದೆ.
Comments are closed.