Karnataka: ಬಿ.ಎಸ್ಸಿ ನರ್ಸಿಂಗ್ ಮತ್ತು ಜೆಎನ್‍ಎಂ ನರ್ಸಿಂಗ್ ಕೋರ್ಸ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

Karnataka: 2025-26 ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜೆಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಪ್ರೋತ್ಸಾಹ ಧನಕ್ಕೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
2025-26 ನೇ ಸಾಲಿಗೆ ಬಿ.ಎಸ್ಸಿ ನರ್ಸಿಂಗ್ ಮತ್ತು ಜೆಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in/Sevasindhu/DepartmentServices ನಲ್ಲಿ ಅರ್ಜಿ ಸಲ್ಲಿಸಬಹುದು.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಮಾಹಿತಿ ಕೇಂದ್ರ, ಸೋಮವಾರಪೇಟೆ ದೂರವಾಣಿ ಸಂಖ್ಯೆ: 8548068519, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ 9972799091 ಹಾಗೂ ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ. 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:Kodi Shri: ದೇಶಕ್ಕೆ ಊಹಿಸಲಾಗದ ದುಃಖ, ಜನವರಿ ಒಳಗೆ ಬಹುದೊಡ್ಡ ಗಂಡಾಂತರ – ಕೊಡಿಶ್ರೀ ಸ್ಫೋಟಕ ಭವಿಷ್ಯ
Comments are closed.