Mangaluru: ಮಂಗಳೂರು: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mangaluru: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಶನಿವಾರ ನಿಧನರಾಗಿದ್ದಾರೆ. 84 ವಯಸ್ಸಿನ ಕಿನ್ನಿಗೋಳಿ ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ಭಾನುವಾರ ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯಕ್ರಿಯೆ ನಡೆಸಲಾಗುವುದು. ಕಿನ್ನಿಗೋಳಿ ಅವರು ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ 55 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:Karnataka: ನಾಗರಿಕ ರಕ್ಷಣಾ ಪಡೆಗಳಿಗೆ ಮಾಜಿ ಸೈನಿಕರ ಭರ್ತಿಗೆ ಅರ್ಜಿ ಆಹ್ವಾನ!
Comments are closed.