School: ಶಾಲಾ ಮೇಲ್ಚಾವಣಿ ಕುಸಿತ – ಇಬ್ಬರು ವಿದ್ಯಾರ್ಥಿಗಳು ಹಾಗೂ ಶಿಕ್ಷಕನಿಗೆ ಗಾಯ

School: ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲೆ ಪ್ರಾರಂಭಾಗುತ್ತಿದ್ದಂತೆ ಶಾಲಾ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಶಿಕ್ಷಕನಿಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಯ್ತು.
ಶಿಕ್ಷಕ ಎಂ.ಡಿ.ಒಂಟಿ, ಒರ್ವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತಲೆಗೆ ಗಂಭೀರ ಗಾಯಗಳಾಗಿದೆ. ಕಳೆದ 6 ತಿಂಗಳ ಹಿಂದೆಯೇ ಮೇಲ್ಚಾವಣಿ ದುರಸ್ತಿ ಮಾಡುವಂತೆ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರೂ ಯಾವುದೇ ಸ್ಪಂದನೆ ದೊರೆತಿರಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments are closed.