Mangaluru Airport: ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

Share the Article

Mangaluru Airport: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಾಸ ಉಂಟಾಗಿದೆ. ಕೊಲ್ಲಿ ರಾಷ್ಟ್ರ ಕತಾರ್‌ನಲ್ಲಿರುವ ಅಮೆರಿಕಾ ಸೇನಾ ನೆಲೆಗಳ ಮೇಲೆ ಇರಾನ್‌ ಮಿಸೈಲ್‌ ದಾಳಿ ಮಾಡಿರುವ ಕಾರಣ ಮಂಗಳೂರಿನಿಂದ ಹೊರಟಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ದಮ್ಮಾಮ್‌ಗೆ ಹೋಗುವ ಬದಲು ಮುಸ್ಕತ್‌ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್‌ ಆಗಿದ್ದು, ಇದೀಗ ಎರಡೂ ವಿಮಾನ ವಾಪಾಸು ಮಂಗಳೂರಿಗೆ ಬಂದಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಕುರಿತು ಏರ್‌ಪೋರ್ಟ್‌ ಆಡಳಿತ ಮಾಹಿತಿ ನೀಡಿದೆ.

ಇದನ್ನೂ ಓದಿ: By Election : 4 ರಾಜ್ಯಗಳ ಉಪಚುನಾವಣೆ ಫಲಿತಾಂಶ ಪ್ರಕಟ – ಎಲ್ಲಿ ಯಾರಿಗೆ ಗೆಲುವು?

Comments are closed.