Weather Report: ಕರ್ನಾಟಕದ ಹವಾಮಾನ ವರದಿ ಹೇಗಿದೆ? ಮತ್ತೆ ಭಾರಿ ಮಳೆಯಾಗುವ ಸೂಚನೆ ಇದೆಯಾ?

Share the Article

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಗಾಳಿ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈಗಿನಂತೆ ಜೂನ್ 29ರಿಂದ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಆಗುವ ಲಕ್ಷಣಗಳಿವೆ. (ನಿನ್ನೆಯ ತನಕ ಜೂನ್ 29ರಿಂದ ಪೂರ್ತಿ ಕಡಿಮೆಯಾಗುವ ಮುನ್ಸೂಚನೆ ಇತ್ತು. ಈಗ ಬದಲಾಗಿದೆ)

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜೂನ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಈಗಿನಂತೆ ಜೂನ್ 27ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜೂನ್ 29ರಿಂದ ಅಲ್ಪ ಪ್ರಮಾಣದಲ್ಲಿ ದುರ್ಬಲಗೊಳ್ಳುವ ಲಕ್ಷಣಗಳಿವೆ.

ಇದನ್ನೂ ಓದಿ Karkala: ಕಾರ್ಕಳ:ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ: ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನ!

Comments are closed.