Murder: ಬೆಂಗಳೂರು: ಮೂವರು ಡಾಬಾ ಮಾಲೀಕರ ಬರ್ಬರ ಕೊಲೆ!

Share the Article

Murder: ಡಾಬಾ ಮಾಲಕರನ್ನು ಕೊಚ್ಚಿ ಕೊಲೆ (Murder) ಮಾಡಿರುವ ಭೀಕರ ಕೃತ್ಯ ಕಲಬುರಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಕಲಬುರಗಿಯ ಹೊರವಲಯದ ಪಟ್ನಾ ಗ್ರಾಮದಲ್ಲಿರುವ ಡಾಬಾದಲ್ಲಿ ಮಂಗಳವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ.

ಹತ್ಯೆಗೀಡಾದವರನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಮೂರು ಜನ ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳು ಡಾಬಾಕ್ಕೆ ನುಗ್ಗಿ ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಬ್ ಅರ್ಬನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Baindoor: ದೇವಾಲಯಗಳ ಜಾಗ ಒತ್ತುವರಿ ತೆರವಿಗೆ ಮಹತ್ವದ ಕ್ರಮ

Comments are closed.