Heavy Rain: ಮತ್ತೆ ಮಳೆ: ನಾಳೆ (ಜೂ.26) ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

Heavy rain: ಕಳೆದ ಕೆಲವು ದಿನಗಳಿಂದ ಸ್ವಲ್ಪ ಮಟ್ಟಿನ ವಿರಾಮ ಪಡೆದಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಶುರುಮಾಡಿದ್ದಾನೆ. ಹೀಗಾಗಿ ನಾಳೆ ಕೂಡಾ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಆರು ಜಿಲ್ಲೆಗಳಲ್ಲಿ ರಜೆ ಘೊಷಣೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಹಾಗೂ ಘಟ್ಟ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು. ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ ಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿ:26-06-2025 ರಂದು ರಜೆಯನ್ನು ಘೋಷಿಲಾಗಿರುತ್ತದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಐದು ತಾಲೂಕು ವ್ಯಾಪ್ತಿಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ.26 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ( ಜೂನ್ 26) ರಂದು ರಜೆ (School holiday) ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
ಹಾಸನದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಜಿಲ್ಲೆಯ 3 ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಹಾಸನ, ಸಕಲೇಶಪುರ , ಆಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಲತಾ ಕುಮಾರಿ ಆದೇಶಿಸಿದ್ದಾರೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಮಳೆ ಆರ್ಭಟ ಹೆಚ್ಚಿದ್ದು, ನಾಳೆ (ಜೂ.26) ಎರಡು ತಾಲೂಕಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಜೋಯಿಡಾ, ದಾಂಡೇಲಿ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದ್ದು, ನಾಳೆಯೂ ಕೂಡಾ ಜಿಲ್ಲೆಯ ಮೂರು ತಾಲುಕಿನ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 26 ರಂದು ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
Comments are closed.