Belthangady: ಭಾರೀ ಮಳೆಯ ಹಿನ್ನೆಲೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ನಾಳೆ (ಜೂ.26) ರಜೆ

School Holiday: ಬೆಳ್ತಂಗಡಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಹಾಗೂ ಘಟ್ಟ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು. ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ ಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿ:26-06-2025 ರಂದು ರಜೆಯನ್ನು ಘೋಷಿಲಾಗಿರುತ್ತದೆ.

ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು, ಕಾಲೇಜುಗಳು ಎಂದಿನಂತೆ ಓಪನ್ ಇರುತ್ತದೆ.
ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ಮಾನ್ಯ ಪುತ್ತೂರು ಸಹಾಯಕ ಆಯುಕ್ತರು ಹಾಗೂ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಯವರಲ್ಲಿ ಚರ್ಚಿಸಿ ಈ ಕೆಳಗಿನ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ ನದಿತೀರ, ತೋಡುಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯತ್ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
ತಾಲೂಕು ಆಡಳಿತದಿಂದ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಗಳಲ್ಲಿ ನೇಮಿಸಲಾಗಿರುವ INCIDENT COMMANDER ಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ತಾಲೂಕು ಕಚೇರಿಯ ನಿತಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ ತೋಡುಗಳ ಹತ್ತಿರ ತೆರಳದಂತೆ ಸೂಚಿಸಲಾಗಿದೆ.
ಸಂಬಂದಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಸಿಕೊಳ್ಳುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಗಳನ್ನು ಸಂಪರ್ಕಿಸುವುದು.
ತುರ್ತು ಸೇವೆಗೆ ತಾಲೂಕು ಕಚೇರಿ ನಂಬ್ರ – 08256232047
Comments are closed.