Shriram: ಡ್ರಗ್ಸ್ ಪ್ರಕರಣ: ಜನಪ್ರಿಯ ನಟ ಶ್ರೀರಾಮ್ ಬಂಧನ! ಇನ್ನೊಬ್ಬ ನಟನಿಗೆ ಹುಡುಕಾಟ!

Shriram: ತೆಲುಗು ಹಾಗೂ ತಮಿಳಿನ ಹಲವಾರು ಸಿನಿಮಾಗಳಲ್ಲಿ ನಾಯಕನಾಗಿ, ನಟಿಸಿರುವ ಜನಪ್ರಿಯ ನಟ ಚೆನ್ನೈ ಮೂಲದ ಶ್ರೀಕಾಂತ್ (ಶ್ರೀರಾಮ್) (Shriram) ಅವರನ್ನು ತಮಿಳುನಾಡು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಸೇಲಂನಲ್ಲಿ ಪ್ರದೀಪ್ ಹೆಸರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತನ ಪರೀಕ್ಷೆ ನಡೆಸಿದಾಗ ಆತ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿತ್ತು. ಆ ವ್ಯಕ್ತಿಯ ವಿಚಾರಣೆ ನಡೆಸಿದ ಬಳಿಕ ಜಾನ್ ಹೆಸರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತನಿಂದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಆ ಬಳಿಕ ಇನ್ನೂ ಕೆಲವು ವ್ಯಕ್ತಿಗಳ ಬಂಧನ ಆಗಿತ್ತು. ಜಾನ್ ಡ್ರಗ್ ಡೀಲರ್ ಆಗಿದ್ದು, ಆತನಿಂದ ನಟ ಶ್ರೀರಾಮ್, ಡ್ರಗ್ಸ್ ಖರೀದಿ ಮಾಡಿದ್ದಾರೆ ಎಂಬುದು ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ಶ್ರೀರಾಮ್ ಅವರು ಡ್ರಗ್ಸ್ ಖರೀದಿ ಮಾಡಿರುವ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ, ಪೊಲೀಸರು ನಟನಿಗೆ ಕೆಲ ದಿನಗಳ ಹಿಂದೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಅಂತೆಯೇ ಶ್ರೀರಾಮ್ ಅವರ ರಕ್ತ ತಪಾಸಣೆ ನಡೆಸಲಾಗಿ ಶ್ರೀರಾಮ್ ಡ್ರಗ್ಸ್ ಸೇವಿಸಿರುವುದು ದೃಢಪಡುತ್ತಿದ್ದಂತೆ ಅವರನ್ನು ಬಂಧಿಸಲಾಗಿದೆ.
ಜೂನ್ 23 ರಂದು ಶ್ರೀರಾಮ್ ಬಂಧನ ಆಗಿದ್ದು, ಇನ್ನೊಬ್ಬ ನಟ ಕೃಷ್ಣಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮಾದಕ ವಸ್ತು ಮಾರಾಟ ಜಾಲವೊಂದರಿಂದ ನಟ ಶ್ರೀರಾಮ್ ಹಾಗೂ ನಟ ಕೃಷ್ಣ ಅವರು ಡ್ರಗ್ಸ್ ಖರೀದಿ ಮಾಡಿ ಸೇವಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: Mangaluru: ಮಂಗಳೂರು:
ವಿಜಯ ಕೋಟ್ಯಾನ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ
Comments are closed.