SSC: SSLC ಆದವರಿಗೆ ಇಲ್ಲಿದೆ ಉದ್ಯೋಗವಕಾಶ: SSC MTS ಹುದ್ದೆಗೆ ಅರ್ಜಿ ಆಹ್ವಾನ

SSC: ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣ ಅವಕಾಶ! ಸಿಬ್ಬಂದಿ ಆಯ್ಕೆ ಆಯೋಗ (SSC) ಶೀಘ್ರದಲ್ಲೇ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡುವ ಕಿರು ಅಧಿಸೂಚನೆ ಹೊರಡಿಸಿದೆ. ಅಧಿ ಸೂಚನೆ ಬಿಡುಗಡೆಯಾದ ನಂತರ ಆಯೋಗದ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಪ್ರಕ್ರಿಯೆಯು ಜುಲೈ 24 ರಂದು ಅಥವಾ ಅದಕ್ಕೂ ಮೊದಲು ಪ್ರಾರಂಭವಾಗುವ ನಿರೀಕ್ಷೆಯಿದೆ. ಆಯೋಗವು ಈ ಹಿಂದೆ ಬಿಡುಗಡೆ ಮಾಡಿದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ, SSC MTS ಪರೀಕ್ಷೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 24 ರವರೆಗೆ ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಲಿದೆ.
SSC MTS-ಹವಿಲ್ದಾರ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. CBN ನಲ್ಲಿ MTS ಮತ್ತು ಹವಿಲ್ದಾರ್ ಹುದ್ದೆಗಳಿಗೆ ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ನಡುವೆ ಇರಬೇಕು. CBIC ಯಲ್ಲಿ ಹವಿಲ್ದಾರ್ ಹುದ್ದೆಗಳಿಗೆ, ಅಭ್ಯರ್ಥಿಯ ವಯಸ್ಸು 18 ರಿಂದ 27 ವರ್ಷಗಳ ನಡುವೆ ಇರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
SSC ಯ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡಿ.
ಮುಖಪುಟದಲ್ಲಿ ನೀಡಿರುವ Apply ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
SSC MTS-ಹವಿಲ್ದಾರ್ ಅರ್ಜಿ ಸಲ್ಲಿಸಲು ಇಲ್ಲಿ ಲಿಂಕ್ ಅನ್ನು ಕ್ಲಿಕ್ ಮಾಡಿ.
ಈಗಲೇ ನೋಂದಾಯಿಸಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿ ಸಲ್ಲಿಸಿ.
ಇದನ್ನೂ ಓದಿ;RRB: ರೈಲ್ವೆ ನೇಮಕಾತಿ ಮಂಡಳಿಯಲ್ಲಿ ತಂತ್ರಜ್ಞ ಗ್ರೇಡ್ I ಮತ್ತು III ಹುದ್ದೆಗಳಿಗೆ ಅರ್ಜಿ ಆಹ್ವಾನ
Comments are closed.