Kodagu: ಜಿಲ್ಲೆಯಾದ್ಯಂತ ಭಾರೀ ಮಳೆ, ನಾಳೆ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Share the Article

Kodagu: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ( ಜೂನ್‌ 27) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಈ ಕುರಿತು ಅಧಿಕೃತ ಆದೇಶ ನೀಡಿದ್ದಾರೆ.

ನದಿಯ ಮಟ್ಟ ಏರಿಕೆಯಾಗುತ್ತಿರುವುದು, ರಸ್ತೆ ಸಂಚಾರ ವ್ಯತ್ಯಯಗೊಳ್ಳುವ ಸಂಭವ ಹಾಗೂ ಕೊಚ್ಚಿಕೊಳ್ಳುವ ಅಪಾಯಗಳ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಉಂಟಾಗದಂತೆ ರಜೆ ಘೋಷಣೆ ಮಾಡಲಾಗಿದೆ.

Comments are closed.