Nikhil Kumaraswamy : ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ನನ್ನ ಸ್ಪರ್ಧೆ – 3 ವರ್ಷಕ್ಕೂ ಮೊದಲೇ ಕ್ಷೇತ್ರ ಘೋಷಿಸಿಕೊಂಡ ನಿಖಿಲ್ ಕುಮಾರಸ್ವಾಮಿ

Nikhil Kumaraswamy : ಈಗಾಗಲೇ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ಸೇರಿ ಒಟ್ಟು ಮೂರು ಚುನಾವಣೆಗಳಲ್ಲಿ ಸೋತಿರುವ ನಿಖಿಲ್ಸ ಕುಮಾರಸ್ವಾಮಿಯವರು ಸೋಲೇ ಗೆಲುವಿನ ಸೋಪಾನ ಎಂಬಂತೆ ತಮ್ಮ ಮುಂದಿನ ಚುನಾವಣೆಯ ಕ್ಷೇತ್ರವನ್ನು ಘೋಷಿಸಿಕೊಂಡಿದ್ದಾರೆ.
ಹೌದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಮೂರು ವರ್ಷಗಳ ಸಮಯಾವಕಾಶವಿದೆ. ಆದರೆ ಈ ಮೂರು ವರ್ಷದ ಮುಂಚಿತವಾಗಿಯೇ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಮುಂದಿನ ವಿಧಾನಸಭಾ ಕ್ಷೇತ್ರವನ್ನು ಘೋಷಿಸಿಕೊಂಡಿದ್ದಾರೆ.
ಈ ಕುರಿತಾಗಿ ಮಾತನಾಡಿದವರು ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ಹೇಳಿದರು.
Comments are closed.