Karnataka: 2025-26 ಗ್ರಾಮಪಂಚಾಯಿತಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

Share the Article

Karnataka: 2025-26 ಸಾಲಿನ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ (Karnataka) ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಉಲ್ಲೇಖ (1) ರ ಆದೇಶದಲ್ಲಿ 2024-25ನೇ ಸಾಲಿನಿಂದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್‌ ಮೂಲಕ ನಡೆಸಲಾಗುತ್ತದೆ. ಅದರಂತೆ ಗ್ರಾಮ ಪಂಚಾಯತಿಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ (2) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ನ್ನು ರೂಪಿಸಿ ಅಧಿಸೂಚನೆಹೊರಡಿಸಲಾಗಿದೆ.

ಈ ವರ್ಗಾವಣೆ ನಿಯಮಗಳ ನಿಯಮ 9 ರನ್ವಯ 2025-26 ನೇ ಸಾಲಿನ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾರ್ವಜನಿಕ ಹಿತಾಸಕ್ತಿಯ ಹಾಗೂ ಕೋರಿಕೆ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 25 ರಿಂದ ಜುಲೈ 28 ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಸದರಿ ವರ್ಗಾವಣೆ ನಿಯಮಗಳ ನಿಯಮ 4 ರನ್ವಯ ಮಂಜೂರಾದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಶೇಕಡಾ 9 ರಷ್ಟು ಕಡ್ಡಾಯ ಸಾರ್ವಜನಿಕಹಿತಾಸಕ್ತಿಯ ವರ್ಗಾವಣೆ ಮತ್ತು ಸಾಮಾನ್ಯ ಕೋರಿಕೆ ವರ್ಗಾವಣೆ ಹಾಗೂ ಶೇಕಡಾ 6 ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶವಿದ್ದು ಅದರಂತೆ ಕ್ರಮವಹಿಸಲು ಸೂಚಿಸಲಾಗಿದೆ. ವರ್ಗಾವಣೆ ನಿಯಮಗಳ ನಿಯಮ 4ರಲ್ಲಿ ಹೇಳಿರುವ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಇಲಾಖೆಯ http://rdprtransfer.karnata ka.gov.in ಸಲ್ಲಿಸುವುದು, ಕೊನೆಯ ದಿನಾಂಕದ ನಂತರ ಸಲ್ಲಿಸುವ ಮನವಿಗಳನು ಸಲ್ಲಿಸುವುದು.

ಇದನ್ನೂ ಓದಿ: Heavy Rain: ಭಾರಿ ಮಳೆ ಹಿನ್ನೆಲೆ – ಶಿರಾಡಿಘಾಟ್‌ನಲ್ಲಿ ಮಣ್ಣು ಕುಸಿತ – ಸಂಚಾರ ಬಂದ್

Comments are closed.