Mangaluru: ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಿನ್ನೆ ಮತ್ತೆ ಹೊಡೆದಾಟ; ಬರ್ಕೆ ಠಾಣೆಯಲ್ಲಿ ಎಫ್‌ಐಆರ್ ದಾಖಲು

Mangaluru: ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಿನ್ನೆ ಗುರುವಾರ ಮತ್ತೆ ಹೊಡೆದಾಟ ನಡೆದಿದೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೈದಿ ಮುಕ್ತಿಯರ್ ಎಂಬಾತ ಸಹ ಕೈದಿ ಕೇಶವ ಎಂಬಾತನ ಮೇಲೆ ಗುರುವಾರ ಮಧ್ಯಾಹ್ನ ಹಲ್ಲೆ ಮಾಡಿದ್ದಾನೆ. ಕೈದಿಗಳನ್ನು ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರು ಪಡಿಸುವ ಸಂದರ್ಭದಲ್ಲಿ ಈ ಹೊಡೆದಾಟ ನಡೆದಿದೆ. ಗಾಯಗೊಂಡ ಕೈದಿ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.
ಪುತ್ತೂರಿನಲ್ಲಿ 2023 ರ ನವೆಂಬರ್‌ನಲ್ಲಿ ನಡೆದಿದ್ದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೈದಿ ಕೇಶವ. ಆರೋಪಿ ಮಹಮದ್ ಮುಕ್ತಿಯಾರ್ 15 ಪ್ರಕರಣಗಳಲ್ಲಿ ಆರೋಪಿ. 2022 ರ ಜುಲೈನಲ್ಲಿ ಕಾಲಿಗೆ ಗುಂಡು ಹೊಡೆದು ಈತನ ಬಂಧನ ಮಾಡಲಾಗಿತ್ತು.
Comments are closed.