Raksha QR Code: ರಾಜ್ಯ ಸರ್ಕಾರದಿಂದ ಮಾದಕ ವಸ್ತುಗಳ ಜಾಲ ಮಟ್ಟ ಹಾಕಲು ದಿಟ್ಟ ಕ್ರಮ: ರಕ್ಷಾ ಕ್ಯೂಆರ್ ಕೋಡ್ ಚಾಲನೆಗೆ

Share the Article

Raksha QR Code: ರಾಜ್ಯದಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಜಾಲವನ್ನು ಮಟ್ಟ ಹಾಕಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಇದೀಗ ರಕ್ಷಾ ಕ್ಯೂಆರ್ ಕೋಡ್ ಅನ್ನು ಚಾಲನೆಗೆ ತಂದಿದೆ

66ನೇ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆಗೊಳಿಸಿದ್ದು,

ಈ ವೇಳೆ ಮಾತನಾಡಿದ ಅವರು ಮಾದಕ ವಸ್ತು ವ್ಯಸನಕ್ಕೆ ಸಿಲುಕಿ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ರಾಜ್ಯದ ಸರಿ ಸುಮಾರು 6.5 ಲಕ್ಷ ವಿದ್ಯಾರ್ಥಿಗಳಿಗೆ ಡ್ರಗ್ಸ್ ದುಷ್ಪರಿಣಾಮ ಕುರಿತು ಅರಿವು ಮೂಡಿಸಲಾಗಿದೆ. ಪ್ರತಿ ತಿಂಗಳು ತಮ್ಮ ಠಾಣಾ ಸರಹದ್ದಿನ ಶಾಲಾ-ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯಬೇಕು. ಅಲ್ಲದೆ, ಡ್ರಗ್ಸ್ ಮಾರಾಟ ಜಾಲಕ್ಕೆ ವಿದ್ಯಾರ್ಥಿಗಳು ಸಿಲುಕದಂತೆ ತಡೆಗಟ್ಟಲು ಕಾಲೇಜು ಮಟ್ಟದಲ್ಲಿ ಮಾದಕ ವಸ್ತು ನಿಗ್ರಹ ಸಮಿತಿ ರಚಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಪೊಲೀಸ್ ಇಲಾಖೆ ಯಾವುದೇಕಾರಣಕ್ಕೂರಾಜೀಮಾಡಿಕೊಳ್ಳುವುದಿಲ್ಲ. ಡ್ರಗ್ಸ್ ಚಟುವಟಿಕೆಯ ಬಗ್ಗೆ ಗೊತ್ತಾದ ಕೂಡಲೇ ಸಾರ್ವಜನಿಕರು ಕ್ಯೂ ಆರ್‌ಕೋಡ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಬೇಕು. ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕಾನೂನುಬಾಹಿರ ಕೃತ್ಯಗಳಿಗೆ ನಾಗರಿಕರು ಆಸ್ಪದ ಕೊಡಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ;Kerala: ಕೇರಳದಲ್ಲಿ ಕಟ್ಟಡ ಕುಸಿತ: ಮೂರು ಜನ ಕಾರ್ಮಿಕರ ಸಾವು: 14 ಜನ ಪ್ರಾಣಪಾಯದಿಂದ ಪಾರು

Comments are closed.