Mysuru: 20ಕ್ಕೂ ಹೆಚ್ಚು ಮಕ್ಕಳಿಗೆ ಕಚ್ಚಿದ ಹುಚ್ಚು ನಾಯಿಗಳು: ಚುಚ್ಚುಮದ್ದಿಲ್ಲದೆ ಪೋಷಕರ ಪರದಾಟ

Mysuru: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಮಕ್ಕಳ ಮೇಲೆ ಹುಚ್ಚು ನಾಯಿಗಳು ದಾಳಿ ಮಾಡಿದ್ದು, ಚುಚ್ಚುಮದ್ದು ಸಿಗದೆ ಪೋಷಕರು ಪರದಾಡುತ್ತಿದ್ದಾರೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಹುಚ್ಚು ನಾಯಿಯೊಂದು ಮಕ್ಕಳ ಮೇಲೆ ದಾಳಿ ಮಾಡಿದ ಘಟನೆ ಗ್ರಾಮವನ್ನು ಬೆಚ್ಚಿಬೀಳಿಸಿದೆ. 20ಕ್ಕೂ ಹೆಚ್ಚು ಮಕ್ಕಳು ಈ ದಾಳಿಯಲ್ಲಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ರೇಬೀಸ್‌ಗೆ ಸಂಬಂಧಿಸಿದ ಚುಚ್ಚುಮದ್ದು ಲಭ್ಯವಿಲ್ಲದಿರುವುದರಿಂದ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ಕಾರಣದಿಂದ ಕೆಲವರು ಖಾಸಗಿ ಆಸ್ಪತ್ರೆಗಳಿಗೆ ಮಕ್ಕಳನ್ನು ಕರೆದೊಯ್ದಿದ್ದಾರೆ
ಆ ಹುಚ್ಚು ನಾಯಿಗಳನ್ನು ಆಕ್ರೋಶದಿಂದ ಗ್ರಾಮಸ್ಥರೇ ಕೊಂದಿದ್ದು, ಗ್ರಾಮದ ಸುತ್ತಮುತ್ತ ಇನ್ನೂ ಎರಡು ಹುಚ್ಚು ನಾಯಿಗಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಇದು ಗ್ರಾಮಸ್ಥರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ;Bheema River: ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಭೀಮ ನದಿಯಲ್ಲಿ ಕೊಚ್ಚಿ ಹೋದ ಯುವಕರು
Comments are closed.