ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಹ ಪ್ರಾಧ್ಯಾಪಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆರೆ, ಕೋರ್ಟ್‌ಗೆ ಹಾಜರು

Share the Article

ಶಿವಮೊಗ್ಗ: ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಸಂಬಂಧ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕನನ್ನು ಪೊಲೀಸರು ಶುಕ್ರವಾರ ಜಿಲ್ಲಾ ಕೋರ್ಟಿಗೆ ಹಾಜರುಪಡಿಸಿದರು. ಆತನಿಗೆ ಕೋರ್ಟ್ ಜು.4ರ ವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಲೈಂಗಿಕ ಕಿರುಕುಳ ನೀಡಿದ ಸಂಬಂಧ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಡಾ| ಅಶ್ವಿನ್ ಹೆಬ್ಬಾರ್ ವಿರುದ್ಧ ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿದ್ದರು.

ತಲೆಮರೆಸಿಕೊಂಡಿದ್ದ ಆರೋಪಿ ವೈದ್ಯನನ್ನು ಪೊಲೀಸರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜೂ.20ರಂದು ವಿದ್ಯಾರ್ಥಿನಿ ದೂರು ದಾಖಲಿಸಿದ್ದು, ಈ ಸಂಬಂಧ ಡಾ| ಅಶ್ವಿನ್ ಹೆಬ್ಬಾರ್ ವಿರುದ್ಧ ಸೆಕ್ಷನ್ 75 (2) ಅಡಿ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯು ಪೊಲೀಸ್ ದೂರು ದಾಖಲಿಸುವ ಮೊದಲು ಕಾಲೇಜಿನ ಆಡಳಿತ ಮಂಡಳಿ ಮತ್ತು ಸಂಸ್ಥೆಯ ಆಂತರಿಕ ದೂರು ಸಮಿತಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಲೈಂಗಿಕ ಕಿರುಕುಳ ನೀಡಿರುವ ಸಿಮ್ಸ್ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಅಶ್ವಿನ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದ್ದರು.

ಇದನ್ನೂ ಓದಿ: Madikeri: ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಹಾನಿ – ಉಸ್ತುವಾರಿ ಸಚಿವರ ಭೇಟಿ

Comments are closed.