Banu Mushtaq: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

Banu Mushtaq: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhila Bharata Kannada Sahitya Sammelana) ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ (Banu Mushtaq) ಆಯ್ಕೆಯಾಗಿದ್ದಾರೆ.

ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ (Ballari) ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.
ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು.
ಇದನ್ನೂ ಓದಿ:OLX app: OLX app ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ: ಆರೋಪಿಯ ಬಂಧನ
Comments are closed.