Tumkuru: ಟೈಯರ್ ಸ್ಪೋಟಗೊಂಡು ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್ಸು

Share the Article

Tumkuru: ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಒಂದರ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆ ಒಂದಕ್ಕೆ ಹೋಗಿ ನುಗ್ಗಿರುವ ಘಟನೆ ನಡೆದಿದೆ.

ಘಟನೆಯಲ್ಲಿ 17 ಮಹಿಳೆಯರು ಸೇರಿ 32 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಬಸ್ಸು ಆಗುಂಬೆಯಿಂದ ಕೋಲಾರದತ್ತ ಸಾಗುತ್ತಿದ್ದ ಬಸ್ ಸಿದ್ದಾಪುರ ಗ್ರಾಮದ ಮೂಲಕ ಹಾದು ಹೋಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ;Banu Mushtaq: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

Comments are closed.