Home News Puttur: ಪುತ್ತೂರು: ಪ್ರೀತಿ ನೆಪದಲ್ಲಿ ದೈಹಿಕ ಸಂಪರ್ಕ: ಪತ್ರಿಕಾಗೋಷ್ಠಿಯಲ್ಲಿ ನಮಗೆ ನ್ಯಾಯ ದೊರಕಿಸಿ ಕೊಡಿ ಎಂದ...

Puttur: ಪುತ್ತೂರು: ಪ್ರೀತಿ ನೆಪದಲ್ಲಿ ದೈಹಿಕ ಸಂಪರ್ಕ: ಪತ್ರಿಕಾಗೋಷ್ಠಿಯಲ್ಲಿ ನಮಗೆ ನ್ಯಾಯ ದೊರಕಿಸಿ ಕೊಡಿ ಎಂದ ಸಂತ್ರಸ್ತೆಯ ತಾಯಿಯಿಂದ ಮನವಿ!

Hindu neighbor gifts plot of land

Hindu neighbour gifts land to Muslim journalist

Puttur: ಇತ್ತೀಚೆಗೆ ಬಿಜೆಪಿ ಮುಖಂಡರೊಬ್ಬರ ಪುತ್ರನಿಂದ ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ್ದ ಸಂತ್ರಸ್ತೆಯ ತಾಯಿ ನಮಗೆ ನ್ಯಾಯ ದೊರಕಿಸಿಕೊಡುವಂತೆ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂ ಮುಖಂಡರು ಸೇರಿದಂತೆ ಪುತ್ತೂರು ಮಹಿಳಾ ಠಾಣೆಗೂ ನಾವು ಈಗಾಗಲೇ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ನಮ್ಮ ಮಗಳಿಗೆ ಆದ ಅನ್ಯಾಯಕ್ಕೆ ಯಾರು ತಲೆಕೆಡಿಸುತ್ತಿಲ್ಲ. ನಮಗೆ ನ್ಯಾಯ ದೊರೆಯದಿದ್ದಲ್ಲಿ ನಾವು ಯಾವುದೇ ಆಮಿಷಗಳಿಗೆ ಬಗ್ಗುವುದಿಲ್ಲ, ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ಧ ಎಂದು ತಿಳಿಸಿದ್ದಾರೆ.

ಈ ಮೊದಲು ಠಾಣೆಯಲ್ಲಿ ಆರೋಪಿಯ ತಂದೆ ಜಗನ್ನಿವಾಸ್‌ ಮುಚ್ಚಳಿಕೆಯನ್ನೂ ಬರೆದು ಕೊಟ್ಟಿದ್ದಾರೆ. ಆದ್ರೆ ಜೂನ್ 22 ರಂದು ಆರೋಪಿ ನನಗೆ ಕಾಲ್ ಮಾಡಿ ನಿಮ್ಮ ಮಗಳನ್ನು ನಾನು ಮದುವೆಯಾಗೋದಿಲ್ಲ ಎಂದು ತಿಳಿಸಿದ್ದಾನೆ. ಅಲ್ಲದೇ ಮಗುವನ್ನು ಅಬೋರ್ಷನ್ ಮಾಡಿ ತೆಗಿಸಿ, ಅದಕ್ಕೆ ಬೇಕಾದ ಹಣವನ್ನು ಕೊಡುತ್ತೇವೆ ಎಂದು ಆರೋಪಿಯ ತಂದೆ ನಮಗೆ ಹೇಳಿದ್ದಾರೆ. ಆದರೆ ನಾವು ಅದಕ್ಕೆ ಒಪ್ಪಿಲ್ಲ.

ನನ್ನ ಮಗಳು ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಆರೋಪಿ ಕೃಷ್ಣ.ಜೆ.ರಾವ್ ನದ್ದೇ ಎನ್ನುವುದಕ್ಕೆ ಎಲ್ಲಾ ಪುರಾವೆಗಳೂ ಇವೆ.

ಮಗು ಅವನ ತರವೇ ಇದೆ. ನಾವು ಮೊದಲಿನಿಂದಲೇ ಮಗುವಿನ ಡಿ.ಎನ್.ಎ ಪರೀಕ್ಷೆ ಮಾಡಲು ಸಿದ್ಧರಿದ್ದೇವೆ, ಮಗುವಿಗೆ ಮೂರು ತಿಂಗಳು ಕಳೆದ ಬಳಿಕ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ ಎಂದರು.

ಇದೀಗ ಅವರು ಕೊಟ್ಟಿರುವ ಮಾತು ತಪ್ಪಿರುವ ಕಾರಣ, ನನ್ನ ಮಗಳಿಗೆ ನ್ಯಾಯ ಕೊಡಿಸಲು ನಾನು ಯಾವ ಪ್ರತಿಭಟನೆಗೂ ಸಿದ್ಧ ಎಂದು ಸಂತ್ರಸ್ತಳ ತಾಯಿ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:Crime: ಮಣಿಪಾಲ: ಆನ್‌ಲೈನ್‌ನಲ್ಲಿ ಹೊಟೇಲ್ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ!