ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಜುಲೈ 1ರಂದು ಪ್ರಕಟ, ವೀಕ್ಷಣೆಗೆ ಈ ಲಿಂಕ್ ಕ್ಲಿಕ್ ಮಾಡಿ

ಬೆಂಗಳೂರು: ದ್ವಿತೀಯ ಪಿಯುಸಿಯ ಪರೀಕ್ಷೆ-3ರ ಫಲಿತಾಂಶವನ್ನು (2nd PUC Exam 3 result 2025), ಇಂದು ಜುಲೈ 1ರಂದು ಮಧ್ಯಾಹ್ನ 1 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ-3 ಹಾಗೂ ಕ್ರೋಡೀಕೃತ ಫಲಿತಾಂಶವನ್ನು ಜಾಲತಾಣದಲ್ಲಿ ಮಂಗಳವಾರ ಮಧ್ಯಾಹ್ನ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-3 ಯನ್ನು ಕಳೆದ ಜೂನ್ 9ರಿಂದ 20ರವರೆಗೆ ನಡೆಸಲಾಗಿತ್ತು. ಇದೀಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಪರೀಕ್ಷೆ-3 ಹಾಗೂ ಕ್ರೋಡೀಕೃತ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತದೆ. ವೀಕ್ಷಣೆಗೆ https://karresults.nic.in/ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
Comments are closed.