Heart Attack: ಹಾಸನ: 2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತಕ್ಕೆ ಸಾವು

Share the Article

Heart Attack: ಹಾಸನದಲ್ಲಿ ಹೃದಯಾಘಾತದಿಂದ ಉಂಟಾಗುವ ಸರಣಿ ಮುಂದುವರಿದಿದೆ. ಇದೀಗ ಹೃದಯಾಘಾತಕ್ಕೆ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕ ಸಂಜಯ್‌ (27) ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.

ನಿನ್ನೆ ಸಂಜೆ ಎದೆನೋವು ಎಂದು ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿದಾಗ ನೋವು ಹೆಚ್ಚಳವಾಗಿದ್ದು, ಹಾಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗುವ ಸಂದರ್ಭದಲ್ಲಿ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ.

ಈ ಕುರಿತು ಹಳ್ಳಿ ಮೈಸೂರು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಕೇಸು ದಾಖಲಾಗಿದೆ.

ಇದನ್ನೂ ಓದಿ: Puttur: ಪುತ್ತೂರು: ಯುವತಿಗೆ ವಂಚನೆ ಪ್ರಕರಣ: ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3 ಕ್ಕೆ ಮುಂದೂಡಿಕೆ

Comments are closed.