BJP: ವಿವಿಧ ರಾಜ್ಯಗಳಿಗೆ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ ಹೈಕಮಾಂಡ್ – ಕರ್ನಾಟಕಕ್ಕೆ ಯಾರು?

BJP: ಭಾರತೀಯ ಜನತಾ ಪಾರ್ಟಿಯು ತನ್ನ ರಾಷ್ಟ್ರ ಅಧ್ಯಕ್ಷರ ನೇಮಕ ಕಾರ್ಯದ ಪ್ರಕ್ರಿಯೆಯನ್ನು ಆರಂಭಿಸಿದೆ. ಇದಕ್ಕೂ ಮೊದಲಾಗಿ ವಿವಿಧ ರಾಜ್ಯಗಳಿಗೆ ನೂತನ ರಾಜ್ಯ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ.

ಹೌದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಆರಂಭಿಸಲು ಪಕ್ಷ ನಿರ್ಧರಿಸಿದ್ದು, ಇದಕ್ಕೆ ಪೂರಕವಾಗಿ ವಿವಿಧ ರಾಜ್ಯಗಳ ಅಧ್ಯಕ್ಷರ ಆಯ್ಕೆಗೆ ಪಕ್ಷ ಮುಂದಾಗಿದೆ. ಅಲ್ಲದೆ ಕೆಲವು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ.
ಅದರಂತೆಯೇ ಪುದಚೇರಿಗೆ ವಿ.ಪಿ.ರಾಮಲಿಂಗಮ್, ಮಿಜೊರಾಂ ಅಧ್ಯಕ್ಷರಾಗಿ ಕೆ. ಬೀಚ್ಚುವಾ ಅವರನ್ನು ಅಲ್ಲಿನ ರಾಜ್ಯಾಧ್ಯಕ್ಷರೆಂದು ಪಕ್ಷವು ಸೋಮವಾರ ಘೋಷಿಸಲಾಗಿದೆ. ತೆಲಂಗಾಣಕ್ಕೆ ರಾಮಚಂದ್ರ ರಾವ್ ಹಾಗೂ ಆಂಧ್ರಪ್ರದೇಶಕ್ಕೆ ಪಿ.ವಿ.ಎನ್. ಮಾಧವ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತಗೊಂಡಿದೆ. ಮಹಾರಾಷ್ಟ್ರದಲ್ಲಿ ಚಂದ್ರಶೇಖರ ಬವಾಂಕುಳೆ ಅವರ ಸ್ಥಾನಕ್ಕೆ ನಾಲ್ಕು ಬಾರಿ ಶಾಸಕರಾಗಿರುವ ರವೀಂದ್ರ ಚವ್ಹಾಣ್ ಹಾಗೂ ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಮಹೇಂದ್ರ ಭಟ್ ಅವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಿದೆ.
ಇನ್ನು ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಕ್ರಮವಾಗಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಔಪಚಾರಿಕವಾಗಿ ಚುನಾವಣಾ ಪ್ರಕ್ರಿಯೆ ಮಂಗಳವಾರ ನಡೆಯಲಿದೆ.
ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹಲವು ಪ್ರಬಲ ನಾಯಕರು ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು ಇಟ್ಟಿದ್ದು ಆಯ್ಕೆ ಪ್ರಕ್ರಿಯೆ ಗೊಂದಲಮಯವಾಗಿದೆ. ಸದ್ಯದಲ್ಲೇ ಕರ್ನಾಟಕಕ್ಕೂ ಕೂಡ ನೂತನ ರಾಜ್ಯಾಧ್ಯಕ್ಷರನ್ನು ಆರಿಸುವ ನಿರೀಕ್ಷೆ ಇದ್ದು, ರಾಜ್ಯದ ಜನರು ತುಂಬಾ ಕುತೂಹಲದಿಂದ ಈ ಆಯ್ಕೆಯನ್ನು ಎದುರುಗಾಣುತ್ತಿದ್ದಾರೆ.
Comments are closed.