Puttur: ಪುತ್ತೂರು: ಯುವತಿಗೆ ವಂಚನೆ ಪ್ರಕರಣ: ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3 ಕ್ಕೆ ಮುಂದೂಡಿಕೆ

Share the Article

Puttur: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚನೆ ಮಾಡಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3 ಕ್ಕೆ ಮುಂದೂಡಲಾಗಿದೆ.

ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್‌ (21) ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ಕರೆಸಿ, ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಣೆ ಮಾಡಿ ವಂಚನೆ ಮಾಡಿರುವ ಕುರಿತು ಸಂತ್ರಸ್ತೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಆರೋಪಿ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಮಾಡುತ್ತಿದ್ದಾರೆ. ಈ ಮಧ್ಯೆ ಆರೋಪಿ ನಿರೀಕ್ಷಣಾ ಜಾಮೀನಿಗೆ ಅಪ್ಲೈ ಮಾಡಿದ್ದು, ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂ.30 ರಂದು ನಡೆದಿದ್ದು ಮುಂದಿನ ವಿಚಾರಣೆಯನ್ನು ಜು.3 ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: Mangaluru: ಬ್ಯಾಂಕ್‌ ಮ್ಯಾನೇಜರ್‌ ನಿಂದಲೇ ಗ್ರಾಹಕರು ಒತ್ತೆ ಇಟ್ಟ 6.5 ಕೆಜಿ ಚಿನ್ನಾಭರಣ ಕಳವು: ತಡವಾಗಿ ಬೆಳಕಿಗೆ ಬಂದ ಪ್ರಕರಣ

Comments are closed.