Karnataka Rain:ಕರಾವಳಿ ಸೇರಿ 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Share the Article

Karnataka Rain: ರಾಜ್ಯದಲ್ಲಿ ಹಲವು ಕಡೆ ಮಳೆ ಚುರುಕುಗೊಂಡಿದ್ದು, ಮುಂದಿನ 2 ದಿನ ಮಳೆಯ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಸಂಬಂಧ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದು ಬಿಟ್ಟರೆ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕಲಬುರಗಿ, ಗದಗ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬೀದರ್‌ನಲ್ಲಿ ಸಾಧಾರಣವಾಗಿ ಮಳೆ ಬಿದ್ದಿದೆ. ಕರಾವಳಿ ಜನರು, ಮೀನುಗಾರರು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Mangalore: ಮಂಗಳೂರು ನ್ಯಾಯಾಲಯಕ್ಕೆ ಉಗ್ರ ಮೊಹಮ್ಮದ್‌ ಅಕ್ಬರ್‌ ಹಾಜರು: ವಿಚಾರಣೆ ಜು.23 ಕ್ಕೆ ಮುಂದೂಡಿಕೆ

Comments are closed.