Father Sentenced to jail: ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡ

Father Sentenced to jail: ಅಪ್ರಾಪ್ತನಿಗೆ ಬೈಕ್ ಕೊಟ್ಟ ತಂದೆಗೆ ಒಂದು ದಿನ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಜೆಎಂಎಫ್ಸಿ ನ್ಯಾಯಾಲಯ ಆದೇಶ ನೀಡಿದೆ.

ತಂದೆ ತನ್ನ ಪುತ್ರನಿಗೆ ಬೈಕ್ ಕೊಟ್ಟು, ಇದೀಗ ಆರು ತಿಂಗಳುಗಳ ಕಾಲ ವಿಚಾರಣೆ ನಡೆಸಿ ನ್ಯಾಯಾಲಯ ತೀರ್ಪು ನೀಡಿದೆ. ಕೋರ್ಟ್ಹಾಲ್ನಲ್ಲಿರುವ ಸೆಲ್ನಲ್ಲೇ ಒಂದು ದಿನದ ಜೈಲು ವಾಸ ಮತ್ತು ದಂಡ ವಿಧಿಸಲಾಗಿದೆ.
ತಂದೆ ನಿನ್ನೆ ಬೆಳಗ್ಗೆಯಿಂದ ಸಂಜೆಯವರೆಗೆ ಜೈಲುವಾಸ ಅನುಭವಿಸಿದ ವ್ಯಕ್ತಿ, ಸಂಜೆ ಆರು ಗಂಟೆ ಬಳಿಕ ರಿಲೀಸ್ ಆಗಿದ್ದಾರೆ. ಅಪ್ರಾಪ್ತರಿಗೆ ವಾಹನಗಳನ್ನು ನೀಡುವ ಪ್ರಕರಣಗಳು ಹೆಚ್ಚಾಗ್ತಿರೋ ಹಿನ್ನೆಲೆ ನ್ಯಾಯಾಲಯ ಇದನ್ನು ಗಂಭೀರವಾಗಿ ಪರಿಗಣಿಸಿ ಈ ತೀರ್ಪು ನೀಡಿದೆ.
Comments are closed.