Mangaluru: ಮಂಗಳೂರು: ಮೂಲ್ಕಿಯಲ್ಲಿ ನಡೆದ ಅಬ್ದುಲ್ ಲತೀಫ್ ಕೊಲೆ ಪ್ರಕರಣ: ಮೂರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!

Share the Article

Mangaluru: 2020ರಲ್ಲಿ ಮೂಲ್ಕಿಯಲ್ಲಿ ನಡೆದಿದ್ದ ಅಬ್ದುಲ್ ಲತೀಫ್ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಪೊಲೀಸರು ಜೂ.30ರಂದು ಬಂಧಿಸಿದ್ದಾರೆ

2020ರ ಜೂನ್ 5ರಂದು ಮೂಲ್ಕಿ ಹೆದ್ದಾರಿ ಬಳಿ ಹಾಡಹಗಲಿನಲ್ಲಿ ಅಬ್ದುಲ್ ಲತೀಫ್ ಎಂಬವರನ್ನು ಆರೋಪಿಗಳಾದ ದಾವೂದ್ ಹಕೀಂ, ಮೊಹಮ್ಮದ್ ಮುಸ್ತಫಾ ಮತ್ತು ಇತರರು ಒಟ್ಟು 10 ಜನ ಸೇರಿ ಕೊಲೆ ಮಾಡಿದ್ದು, ಎಲ್ಲಾ ಆರೋಪಿಗಳ ವಿರುದ್ದ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಪಕ್ಷಿಕರೆ ಕೆಮ್ರಾಲ್ ನಿವಾಸಿ ಮೊಹಮ್ಮದ್ ಮುಸ್ತಫಾ ಎಂಬಾತನಿಗೆ ಉಚ್ಚ ನ್ಯಾಯಾಲಯದಲ್ಲಿ ಅದೇ ವರ್ಷದ ಅ.19 ರಂದು ಜಾಮೀನು ಸಿಕ್ಕಿತ್ತು. ನಂತರ ಸರ್ವೋಚ್ಚ ನ್ಯಾಯಾಲಯವು ಜಾಮೀನು ರದ್ದು ಮಾಡಿರುತ್ತದೆ. ಆದರೆ ಶರಣಾಗದ ಆರೋಪಿ ಮೊಹಮ್ಮದ್ ಮುಸ್ತಫಾ ತಲೆಮರೆಸಿಕೊಂಡಿದ್ದ. ನಕಲಿ ಪಾಸ್‌ಪೋರ್ಟ್‌ ಬಳಸಿದ್ದ ಮುಸ್ತಫಾ ಓಮನ್ ರಾಷ್ಟಕ್ಕೆ ಪರಾರಿಯಾಗಿ ನಂತರ ನೇಪಾಳ ಮೂಲಕ ಭಾರತ ದೇಶಕ್ಕೆ ಬಂದಿದ್ದ. ಜೂ.30ರಂದು ಈತನನ್ನು ಮುಲ್ಕಿಯ ಪಕ್ಷಿಕೆರೆ ಬಳಿ ಪತ್ತೆ ಮಾಡಿದ ಪೊಲೀಸರು బంధిసి ನ್ಯಾಯಾಲಯದ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: School: ಸರ್ಕಾರಿ ಶಿಕ್ಷಣ ಸಂಸ್ಥೆ ಉಳಿಸಲು ಹತ್ತು ಲಕ್ಷಕ್ಕೂ ಅಧಿಕ ಜನರಿಂದ ಸಹಿ!

Comments are closed.